ಲೋಕಬಂಧು ನ್ಯೂಸ್ | ಉಡುಪಿ, ಮಾ.15
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಎಂ.ಲಕ್ಷ್ಮೀನಾರಾಯಣ ರಾವ್ (58) ಶನಿವಾರ ರಾತ್ರಿ ಪೂನಾದಲ್ಲಿನ ತಮ್ಮ ಮಗಳ ಮನೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
