ಕೀಳರಿಮೆ ತೊರೆದು ಮುನ್ನುಗ್ಗಿ

ಉಡುಪಿ | ಲೋಕಬಂಧು ನ್ಯೂಸ್
ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗ್ಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಮಣಿಪಾಲ ಕಸ್ತೂರಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಲತಾ ಭಂಡಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯ ಸಹಯೋಗದೊಂದಿಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿನಿಯರು ಸಾಧನೆ ಮಾಡಿ ಗೌರವ ಸ್ವೀಕರಿಸುವಂತಾಗಬೇಕು ಎಂದವರು ಆಶಿಸಿದರು.


ಅಧ್ಯಕ್ಷತೆ ವಹಿಸಿದ್ದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು, ಪ್ರಸ್ತುತ ಮಹಿಳೆಯರು ಅಬಲೆಯರಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಆಕೆಯ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯರ ಪಾತ್ರ ಯಾವತ್ತೂ ಇರುತ್ತದೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು.


ಕಾಲೇಜಿನ ಸಿಓಓ ಡಾ. ಗೌರಿ ಪ್ರಭು ಇದ್ದರು.


ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕಿಯರಾದ ಅಮೃತ ಕೃಷ್ಣಮೂರ್ತಿ, ಅರುಣಾಕಲಾ, ಅನಿತಾ ಬಾಳಿಗ, ಡಾ.ಕಾಂತಿ ಹರೀಶ್, ಡಾ.ಅರ್ಚನಾ ಎಂ.ವಿ., ಡಾ.ಶೃತಿ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.


ಮಾಧವ ಪೂಜಾರಿ ಸ್ವಾಗತಿಸಿ, ನಿರೂಪಿಸಿದರು. ವಿದ್ಯಾರ್ಥಿ ಚರಣರಾಜ್ ವಂದಿಸಿದರು.