ಲೋಕಬಂಧು ನ್ಯೂಸ್ | ಉಡುಪಿ, ಮಾ.14
ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡಿಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರೆ ತಾಯಿ ಮೃತಪಟ್ಟು ಸವಾರ ಮಗ ಗಾಯಗೊಂಡ ಘಟನೆ ನಿಟ್ಟೂರು ಸಮೀಪ ಸಂಭವಿಸಿದೆ.
ಮೃತರನ್ನು ಉಡುಪಿ ಇಂಟಕ್ ಜಿಲ್ಲಾ ಕಾರ್ಯದರ್ಶಿ ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಅವರ ಮಗ ಸವಾರ ಶರ್ವಿನ್ (20) ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಯಿ ಮಗ ಹೋಗುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಿಟ್ಟೂರು ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್'ಗೆ ಢಿಕ್ಕಿ ಹೊಡೆದಿದ್ದು, ಸಹ ಸವಾರೆ ಹೆಲೆನ್ ಸೋನ್ಸ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟರು.
ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.