ದೇಶ-ದೇಶಗಳ ಐಕ್ಯತೆಗಾಗಿ ಪ್ರಾರ್ಥನೆ

ಕಾಪು: ಮಧ್ಯಪ್ರಾಚ್ಛ ರಾಷ್ಟ್ರದಲ್ಲಿ ನಡೆಯುತ್ತಿರುವ ಸಮರ ಸಂಘರ್ಷ ಶಮನವಾಗಲಿ, ದೇಶ ದೇಶಗಳ ಮಧ್ಯೆ ಐಕ್ಯತೆ ಪ್ರಾಪ್ತಿಯಾಗಲಿ ಎಂದು ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ  ಪ್ರಾರ್ಥನೆ ಸಲ್ಲಿಸಲಾಯಿತು.ವಿಶೇಷವಾಗಿ 18 ದೇಶಗಳಲ್ಲಿರುವ ಸಮಿತಿಯ ಪದಾಧಿಕಾರಿಗಳು ಮತ್ತು ಕಾಪುವಿನ ಅಮ್ಮನ ಭಕ್ತರ ಒಳಿತಿಗಾಗಿ ಪ್ರಾರ್ಥಿಸಲಾಯಿತು.


ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ, ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ದೇವಿಪಾತ್ರಿ ಗುರುಮೂರ್ತಿ ಮತ್ತು ಸಚಿನ್ ಮೊದಲಾದರಿದ್ದರು.