ಲೋಕಬಂಧು ನ್ಯೂಸ್ ಉಡುಪಿ, ಮಾ.23
ವಾಣಿಜ್ಯ ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡದಿರುವುದನ್ನು ಖಂಡಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮುಂಭಾಗದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಸೋಮವಾರ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ಆರಂಭಿಸಿದರು.ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ ವಾಣಿಜ್ಯ ಏಕವಿನ್ಯಾಸ ನಕ್ಷೆಗಾಗಿ 2024ರ ಮಾ.20ರಂದು ಅರ್ಜಿ ಸಲ್ಲಿಸಿದ್ದು, ಇನ್ನೂ ಅಧಿಕಾರಿಗಳು ಅನುಮೋದನೆ ನೀಡಿಲ್ಲ ಎಂದು ರಘುಪತಿ ಭಟ್ ಆರೋಪಿಸಿದರು.
ಭಟ್ ಹೋರಾಟಕ್ಕೆ ಬೆಂಬಲ ಸೂಚಿಸಿ ಸಾರ್ವಜನಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.ರಘುಪತಿ ಭಟ್ ಅವರ ಜಾಗದ ವಿಚಾರವಾಗಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಕಾನೂನು ಸಲಹೆ ಪಡೆದು ಏಕವಿನ್ಯಾಸ ನಕ್ಷೆ ಅನುಮೋದನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳಕ್ಕಾಗಮಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹೇಶ್ಚಂದ್ರ ಜೆ. ತಿಳಿಸಿದರು.
ರಘುಪತಿ ಭಟ್ ಅವರ ಜಾಗಕ್ಕೆ ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಆದರೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಕ್ರಮ ಕೈಗೊಂಡಿಲ್ಲ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ತಿಳಿಸಿದರು.