ಬನ್ನಂಜೆ ಬ್ರಹ್ಮಕಲಶ ಲಾಂಛನ ಬಿಡುಗಡೆ

ಲೋಕಬಂಧು ನ್ಯೂಸ್, ಉಡುಪಿ
ಏಪ್ರಿಲ್‌ನಲ್ಲಿ ನಡೆಯವ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಲಾಂಛನ ಅನಾವರಣ ಗುರುವಾರ ದೇವಸ್ಥಾನದ ಆವರಣದಲ್ಲಿ ನಡೆಯಿತು.ಶಾಸಕ ಯಶಪಾಲ್ ಸುವರ್ಣ ಲಾಂಛನ ಅನಾವರಣಗೊಳಿಸಿ ಸರ್ವರ ಸಹಭಾಗಿತ್ವದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಶಾಸಕ ಕೆ.ರಘುಪತಿ ಭಟ್, ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉದ್ಯಮಿ ನಾಗರಾಜ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಪ್ರಧಾನ ತಂತ್ರಿ ಶಶಿಕಾಂತ್ ತಂತ್ರಿ, ಪ್ರಮುಖರಾದ ಪ್ರಭಾಕರ ಪೂಜಾರಿ, ಗೋಪಾಲ ಬಂಗೇರ, ವಾಣಿ ವಿ. ರಾವ್ ಉಪಸ್ಥಿತರಿದ್ದರು.


ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ಕಾರ್ಯಕ್ರಮ ನಿರೂಪಿಸಿದರು.