ಸಂತೆಕಟ್ಟೆ ಮೇಲ್ಸೇತುವೆ ಸಂಚಾರ ಮುಕ್ತ

ಲೋಕಬಂಧು ನ್ಯೂಸ್ ಉಡುಪಿ, ಮಾ.30
ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ನಿರ್ಮಿಸಲಾದ ಮೇಲ್ಸೇತುವೆ ಸಾರ್ವಜನಿಕ ಸಂಚಾರಕ್ಕೆ ಸೋಮವಾರದಿಂದ ಮುಕ್ತಗೊಂಡಿದೆ.ಕಳೆದ ಸುಮಾರು 3 ವರ್ಷದಿಂದ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರ ದುಸ್ತರವಾಗಿತ್ತು. ಅನೇಕ ಅಪಘಾತಗಳು ಸಂವಿಸಿದ್ದು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.


ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಾರ್ವಜನಿಕ ಸಂಚಾರಕ್ಕೆ ಮೇಲ್ಸೇತುವೆ ಮುಕ್ತಗೊಳಿಸಿ ಮಾತನಾಡಿ, ಬಾಕಿ ಇರುವ ಸಣ್ಣಪುಟ್ಟ ಕಾಮಗಾರಿ ಮುಗಿದ ಬಳಿಕ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಕಾಮಗಾರಿ ವಿಳಂಬದಿಂದಾಗಿ ಸಾರ್ವಜನಿಕರಿಂದ ಟೀಕೆ ಸಹಜವಾಗಿಯೇ ಬಂದಿದ್ದು, ಅವುಗಳನ್ನು ಗೌರವದಿಂದ ಸ್ವೀಕರಿಸುವುದಾಗಿ ಹೇಳಿದರು.


ಕಟಪಾಡಿ ಹಾಗೂ ಅಂಬಲಪಾಡಿ ಭಾಗದ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಗೆ ವೇಗ ನೀಡಲಾಗುವುದು ಎಂದರು.