ಬದುಕಿನ ಸಾರ್ಥಕತೆಗೆ ಮತ್ತೊಮ್ಮೆ ಮಕ್ಕಳಾಗಬೇಕು

ಲೋಕಬಂಧು ನ್ಯೂಸ್ | ಉಡುಪಿ, ಮಾ.30
ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ಖ್ಯಾತ ರಂಗ ನಿರ್ದೇಶಕ ಜೀವನರಾಮ್ ಸುಳ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಅವಿನಾಶ್ ಕಾಮತ್ ನೇತೃತ್ವದಲ್ಲಿ ಶಾರದಾ ಮಂಟಪ ರಸ್ತೆಯ 'ರಂಗವಲ್ಲಿ' ಮನೆಯ ಆವರಣದಲ್ಲಿ ಆಯೋಜಿಸಿದ್ದ 'ಕೂತು ಮಾತಾಡುವ' ಕಾರ್ಯಕ್ರಮದಲ್ಲಿ ಮಾತನಾಡಿದರು.


ನಾವು ನಮ್ಮ ಋಣಾತ್ಮಕ ಅಂಶಗಳನ್ನು ಮತ್ತೊಬ್ಬರಿಗೆ ತಿಳಿಸದೆ ಅದನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಪರಿಪಾಠ ಬೆಳೆಯಬೇಕು ಎಂದರು.


ತನ್ನ ಬದುಕಿನ ರೋಚಕ ಕಥೆಗಳನ್ನು ವಿವರಿಸುತ್ತಾ ಅವರ ಸಾಧನೆಯ ಬಗ್ಗೆ ವಿಸ್ತಾರವಾಗಿ ತಿಳಿಸಿದರು.


ಬದುಕಿನಲ್ಲಿ ನಡೆದ ಹಲವು  ಘಟನೆಗಳು, ಕಷ್ಟದಿಂದ ಮೇಲೆದ್ದು ಬಂದ ರೋಚಕ ಕಥೆಗಳು ಇತ್ಯಾದಿಗಳನ್ನು ಸಭಿಕರಿಗೆ ಭಾವನಾತ್ಮಕವಾಗಿ ಮೂಲಕ ವಿವರಿಸಿದರು.


ನಿರೂಪಕ ಅವಿನಾಶ್ ಕಾಮತ್ ಸಂಯೋಜಿಸಿದ್ದರು. ಈ ಸಂದರ್ಭದಲ್ಲಿ ಜೀವನ್ ರಾಮ್ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.


ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಕಸಾಪ ಉಡುಪಿ ತಾಲೂಕಿನ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಧ್ಯಾ ಶೆಣೈ, ಶಿಲ್ಪಾ ಜೋಶಿ, ರಾಘವೇಂದ್ರ ಪ್ರಭು ಕರ್ವಾಲು, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಮೊದಲಾದವರಿದ್ದರು.