ಕಾಸರಗೋಡು: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕನ್ನಡ ಭವನ ಮತ್ತು ಗ್ರಂಥಾಲಯದ ನೇತೃತ್ವದಲ್ಲಿ ಕಾಸರಗೋಡಿನಲ್ಲಿ ನಡೆದ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ನೇತ್ರ ತಜ್ಞ ನಾಡೋಜ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರನ್ನು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದರು ಸನ್ಮಾನಿಸಿದರು.ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿರುವ ಜೊತೆಗೆ ಕಳೆದ 25 ವರ್ಷಗಳಿಂದ ರಾಜ್ಯಾದ್ಯಂತ ನಿರಂತರವಾಗಿ ನೇತ್ರ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕಗಳ ವಿತರಣೆ ಇತ್ಯಾದಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಡಾ.ಕೃಷ್ಣಪ್ರಸಾದ್ ಮಾದರಿ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ ಎಂದು ಶ್ರೀಪಾದರು ಹೇಳಿದರು.
ಲಕ್ಷ್ಮೇಶ್ವರ ಗೋನಾಳದ ಶ್ರೀ ರಮೇಶ ಮಹಾಸ್ವಾಮಿ, ಕನ್ನಡ ಭವನ ನಿರ್ದೇಶಕ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಚು.ಸಾ.ಪ. ದ.ಕ. ಜಿಲ್ಲಾ ಘಟಕ ಅಧ್ಯಕ್ಷ ಡಾ.ಕೆ.ಗೋವಿಂದ ಭಟ್, ದ.ಕ. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರಿದ್ದರು.