ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ: ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ

ಲೋಕಬಂಧು ನ್ಯೂಸ್ | ಉಡುಪಿ, ಮಾ.30
ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು ಮತ್ತು ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ಸರ್ವಾನುಮತದಿಂದ ಆಯ್ಕೆಯಾದರು.


ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.


ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು ಭಾಗವಹಿಸಿದ್ದ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು.


ಮೇ 3ರಂದು ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಖ್ಯಾತ ವೈದ್ಯ, ಸಾಹಿತಿ, ಕಲಾವಿದ ಡಾ.ಭಾಸ್ಕರಾನಂದ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.


ಈ ಸಂದರ್ಭಲ್ಲಿ ಉಡುಪಿ ವಿಶ್ವನಾಥ ಶೆಣೈ, ವಿಶ್ರಾಂತ ಬ್ಯಾಂಕ್ ಅಧಿಕಾರಿ ಸಿ.ಎಸ್. ರಾವ್, ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜಿನಿ ವಸಂತ್, ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ ಉಪಸ್ಥಿತರಿದ್ದರು.