ಕಟಪಾಡಿ: ಏ.10ರಿಂದ ರಸ್ತೆಯ ಒಂದು ಭಾಗ ಸಂಚಾರಕ್ಕೆ ಮುಕ್ತ

ಲೋಕಬಂಧು ನ್ಯೂಸ್ | ಉಡುಪಿ, ಏ.6
ಕಾಮಗಾರಿ ನಡೆಯುತ್ತಿರುವ ಹೆದ್ದಾರಿ 66ರ ಕಟಪಾಡಿಯ ಒಂದು ಭಾಗದ ರಸ್ತೆ ಏ.10ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು‌ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಕಟಪಾಡಿ ಓವರ್ ಪಾಸ್ ಕಾಮಗಾರಿ ವೀಕ್ಷಿಸಿ ಮಾತನಾಡಿದರು.


ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದರು.


ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಶ್ ಬಲ್ಲಾಳ್ ಮತ್ತು ಪವಿತ್ರ ಶೆಟ್ಟಿ, ಕೋಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಯೋಗೀಶ್, ಹರ್ಷಿತ್ ಮತ್ತು ರತ್ನಾಕರ್, ಕುರ್ಕಾಲು ಗ್ರಾಮ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಪೂಜಾರಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಮಹಾಶಕ್ತಿ ಕೇಂದ್ರದ ನಿತಿನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.