ಲೋಕಬಂಧು ನ್ಯೂಸ್ | ಉಡುಪಿ, ಏ.2
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮಕುಂಭಾಭಿಷೇಕ ಹಿನ್ನೆಲೆಯಲ್ಲಿ 'ಬನ್ನಂಜೆ ಶ್ರೀ ಮಹಾಲಿಂಗೇಶ್ವರ ವೈಭವ' ಪ್ರಯುಕ್ತ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. ಅವರ ಮಧುರ ಕಂಠದಿಂದ ಮೂಡಿಬಂದ 'ಬನ್ನಂಜೆ ಒಡೆಯ ಮಹಾಲಿಂಗೇಶ್ವರ' ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಏ.3ರಂದು ಬೆಳಿಗ್ಗೆ 10 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಂಗಣದಲ್ಲಿ ನಡೆಯಲಿದೆ.