ಲೋಕಬಂಧು ನ್ಯೂಸ್ | ಉಡುಪಿ, ಏ.7
ಬಹುಭಾಷಾ ಚಲನಚಿತ್ರ ನಟ ಹಾಗೂ ನಿರ್ದೇಶಕ ಸಂಪತ್ ರಾಜ್ ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಮೊದಲಾದವರಿದ್ದರು.
