ಲೋಕಬಂಧು ನ್ಯೂಸ್ | ಉಡುಪಿ, ಏ.16
ನಗರದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಏ.20ರಂದು ನಡೆಯುವ ಬ್ರಹ್ಮಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿಗಳಾದ ಶಶಿಕಾಂತ ತಂತ್ರಿ ಮತ್ತು ದೇವಳದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ ನೇತೃತ್ವದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ, ಗೌರವ ಸಲಹೆಗಾರ ನಾಡೋಜ ಡಾ.ಜಿ.ಶಂಕರ್ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ ಕಾಂಚನ್ ಮತ್ತು ದೇವಳದ ಆಡಳಿತ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳ ಉಪಸ್ಥಿತಿಯೊಂದಿಗೆ ಗುರುವಾರ ಆರಂಭಗೊಂಡಿತು.
ಸಂಜೆ ವಿವಿಧ ಹೋಮಾದಿಗಳು ನಡೆದವು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಮಾಧವ ಪೂಜಾರಿ ಮತ್ತು ಮೀನಾಕ್ಷಿ ಮಾಧವ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿನೇಶ್ ಪುತ್ರನ್, ಎಂ. ಪ್ರಭಾಕರ್ ಶೆಟ್ಟಿ, ಶೇಖರ ಶೆಟ್ಟಿ ಯು. ಸುದೇಶ್ ಶೇಟ್, ರಾಜೇಶ್ ಬಿ.,ವಿದ್ಯಾಲತಾ ಯು. ಶೆಟ್ಟಿ, ಶಮಿತಾ ಎಸ್. ಭಂಡಾರಿ ಮೊದಲಾದವರಿದ್ದರು.
ಶಿವಪ್ರೇರಣ ಸಹಸ್ರಕಂಠ ಗಾಯನ
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ 8ರಿಂದ ಬೈಲೂರು ಚೈತನ್ಯ ಕಲಾವಿದರಿಂದ 'ರಾಘು ಮಾಸ್ಟ್ರು' ತುಳು ನಾಟಕ ಪ್ರದರ್ಶನಗೊಂಡಿತು.
.jpg)
.jpg)
.jpg)
.jpg)
.jpg)
.jpg)
.jpg)
.jpg)