ಬನ್ನಂಜೆ ವೈಭವ: ಸಾಗಿಬಂದ ಹೊರೆಕಾಣಿಕೆ

ಲೋಕಬಂಧು ನ್ಯೂಸ್ | ಉಡುಪಿ, ಏ.15
ಬ್ರಹ್ಮಕುಂಭಾಭಿಷೇಕ ಸಡಗರದಲ್ಲಿರುವ‌ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ- ಬನ್ನಂಜೆ ವೈಭವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬುಧವಾರ ನಗರದ ಜೋಡುಕಟ್ಟೆಯಿಂದ ಬನ್ನಂಜೆ ದೇವಳದ ವರೆಗೆ ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ.ಜಿ.ಶಂಕರ್ ಅವರು ಮೆರವಣಿಗೆಗೆ ಚಾಲನೆ ನೀಡಿದರು.
ದೇವಳದ ಅರ್ಚಕ ವಾಸುದೇವ ಉಪಾಧ್ಯಾಯ, ಆಡಳಿತ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ ಕಾಂಚನ್, ಆಡಳಿತ ಸಮಿತಿ ಸದಸ್ಯರಾದ ದಿನೇಶ ಪುತ್ರನ್, ಪ್ರಭಾಕರ ಶೆಟ್ಟಿ, ಶೇಖರ ಶೆಟ್ಟಿ, ಸುದೇಶ ಶೇಟ್, ರಾಜೇಶ್ ಬಿ., ವಿದ್ಯಾಲತಾ ಯು.ಶೆಟ್ಟಿ, ಶಮಿತಾ ಎಸ್. ಭಂಡಾರಿ, ಪ್ರಮುಖರಾದ ಪ್ರಸಾದರಾಜ್ ಕಾಂಚನ್, ದ.ಕ. ಮೊಗವೀರ ಮಹಾಸಭಾ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಬನ್ನಂಜೆ ಜಯ ಶೆಟ್ಟಿ, ಉದ್ಯಮಿ ಪುರುಷೋತ್ತಮ ಶೆಟ್ಟಿ ಮೊದಲಾದವರಿದ್ದರು.
ಪೂರ್ಣಕುಂಭ ಹಿಡಿದ ಮಹಿಳೆಯರು, ವಿವಿಧ ಜಸನಪದ ತಂಡಗಳು ಮೆರವಣಿಗೆಯ ಅಂದ ಹೆಚ್ಚಿಸಿದವು.
ಹಸಿರುವಾಣಿ ಹೊತ್ತ ಅನೇಕ ವಾಹನಗಳು ಜೋಡುಕಟ್ಟೆಯಿಂದ ಕೋರ್ಟ್ ರಸ್ತೆ, ಕವಿ ಮುದ್ದಣ ಮಾರ್ಗ, ಸರ್ವಿಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ ಮೂಲಕ ಸಾಗಿ ಬನ್ನಂಜೆ ದೇವಳ ತಲುಪಿತು.