ಲೋಕಬಂಧು ನ್ಯೂಸ್ | ಉಡುಪಿ, ಏ.6
ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರಾದ ಕೆ.ಟಿ. ಪೂಜಾರಿ ಕೊಡವೂರು, ಕಾಳು ಶೇರಿಗಾರ್ ಕೊಡವೂರು, ದಯಾನಂದ ನಾಯಕ್ ಮಣಿಪಾಲ, ಬಿ.ರಮಾನಾಥ ಹೆಗ್ಡೆ ಹೆರ್ಗ, ಹೆರಿಯ ಅಮ್ಮುಂಜೆ ಅವರನ್ನು ಶಾಲು ಹೊದಿಸಿ, ಫಲವಸ್ತು- ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸನ್ಮಾನಿತರನ್ನು ಅಭಿನಂದಿಸಿ, ಸ್ಥಾಪನಾ ದಿನಾಚರಣೆ ಕುರಿತು ಮಾತನಾಡಿದರು.
ಉಡುಪಿ ಶಾಸಕ ಯಶಪಾಲ್ ಸುವರ್ಣ ಬಿಜೆಪಿ ಸ್ಥಾಪನಾ ದಿನದ ಶುಭಾಶಯ ತಿಳಿಸಿದರು.
ಸನ್ಮಾನಿತರ ಪರವಾಗಿ ನಿವೃತ್ತ ಪ್ರಾಂಶುಪಾಲ ದಯಾನಂದ ನಾಯಕ್ ಮಣಿಪಾಲ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಮೊದಲಾದವರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ವಂದೇ ಮಾತರಂ ಹಾಡಿದರು. ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಸ್ವಾಗತಿಸಿ, ಶಿವಕುಮಾರ್ ಅಂಬಲಪಾಡಿ ನಿರೂಪಿಸಿದರು. ಗಿರೀಶ್ ಎಂ. ಅಂಚನ್ ವಂದಿಸಿದರು.
