ಬಿಜೆಪಿ ಮುಖಂಡ ಸಮಾಜ ಸೇವಕ ಉದಯ ಶೆಟ್ಟಿ ಇನ್ನ ನಿಧನ

ಲೋಕಬಂಧು ನ್ಯೂಸ್ ಪಡುಬಿದ್ರಿ, ಏ.17
ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಮಾಜಿ ಜಿಲ್ಲಾ ಸಂಚಾಲಕ, ಲಯನ್ಸ್ ಧುರೀಣ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಉದ್ಯಮಿ ಉದಯ ಶೆಟ್ಟಿ ಇನ್ನಾ ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು.ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.


ಸರಳ, ಸಜ್ಜನಿಕೆ ಹಾಗೂ ಚುರುಕಿನ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಉದಯ ಶೆಟ್ಟಿ ಇನ್ನ, ಬಿಜೆಪಿ ಮುಖಂಡರಾಗಿ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಅಪಾರ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಸಂತಾಪ
ಉದಯ ಶೆಟ್ಟಿ ಇನ್ನ ನಿಧನಕ್ಕೆ ಬಿಜೆಪಿ ನಿಕಟಪೂರ್ವ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ.ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಸಹಿತ ಪಕ್ಷದ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.