ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ನಿತ್ಯ ಅನ್ನದಾನಕ್ಕಾಗಿ ಅಗತ್ಯವಿರುವ ನೂತನ ಬಾಯ್ಲರ್ ವ್ಯವಸ್ಥೆಯನ್ನು ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ.ಉದಯಕುಮಾರ ಸರಳತ್ತಾಯ, ಉಡುಪಿಯ ಶಾಸಕ ಯಶಪಾಲ್ ಸುವರ್ಣ ಹಾಗೂ ಮಠದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.