ಲೋಕಬಂಧು ನ್ಯೂಸ್ | ಮಂಡ್ಯ, ಏ.15
ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನೂತನವಾಗಿ ನಿರ್ಮಿಸಲಾದ 'ಶ್ರೀಗುರು ಭೈರವೈಕ್ಯ ಮಂದಿರ' ಉದ್ಘಾಟನೆಗಾಗಿ ಬುಧವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಬರಮಾಡಿಕೊಂಡರು.
ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ರಾಜ್ಯದ ವಿವಿಧ ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಪ್ರಧಾನಿಯವರಿಗೆ ಸಲ್ಲಿಸಿದರು.
