ಲೋಕಬಂಧು ನ್ಯೂಸ್ | ಉಡುಪಿ, ಏ.1
ಇಂದ್ರಾಣಿ ಪಂಚದುರ್ಗಾಪರಮೇಶ್ವರಿ ದೇವಳಕ್ಕೊಳಪಟ್ಟಿರುವ ಶ್ರೀ ಆಂಜನೇಯ ಹಾಗೂ ನಾಗದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಅಂಗವಾಗಿ ಆಯೋಜಿಸಲಾದ ಹೊರೆಕಾಣಿಕೆ ಮೆರವಣಿಗೆಗೆ ಬುಧವಾರ ಕೃಷ್ಣಮಠದಲ್ಲಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಶ್ರೀ ಮುಖ್ಯಪ್ರಾಣ ದೇವರ ಗುಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೂಪತಿ ಶೆಟ್ಟಿ ಇಂದ್ರಾಳಿ, ಇಂದ್ರಾಣಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಕುಶಲ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಾಕರ್ ಇಂದ್ರಾಳಿ, ಕೋಶಾಧಿಕಾರಿ ರತ್ನಾಕರ್ ಶೆಟ್ಟಿ ಬುಡ್ನಾರು, ಪದಾಧಿಕಾರಿಗಳಾದ ಸಾಧು ಶೆಟ್ಟಿ, ಸೀತಾರಾಮ ನಾಯಕ್ ಮೊದಲಾದವರಿದ್ದರು.