ಸಮ್ಮೇಳನದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಲೋಕಬಂಧು ನ್ಯೂಸ್ ಉಡುಪಿ, ಏ.11
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಮೇ 3ರಂದು ಡಾ.ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆಯಲ್ಲಿ ನಡೆಯುವ‌ 16ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ತಾಲೂಕು ಮಟ್ಟದ ಖಾಸಗಿ ಮತ್ತು ಸರ್ಕಾರಿ ಶಾಲೆಯ ಎಸ್ಎಸ್ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿಭಾಗದಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು  ಗೌರವಿಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಸಾಪ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು (98808 11036) ಅವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.