ಉಡುಪಿ ಜಿಲ್ಲೆಯ ಇಬ್ಬರಿಗೆ ಗಡಿಪಾರು ಆದೇಶ

ಲೋಕಬಂಧು ನ್ಯೂಸ್ | ಉಡುಪಿ, ಏ.3
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರಿಫ್ ಎಂಬವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕ ಗಡಿಪಾರು ಆದೇಶ ಜಾರಿಮಾಡಿ ಆದೇಶ ಹೊರಡಿಸಿದ್ದಾರೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಪಿತ್ರೋಡಿ ನಿವಾಸಿ ವಿಜೇತನ ವಿರುದ್ಧ 4 ಕೊಲೆ ಯತ್ನ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ. ಆತನನ್ನು ಕಾರವಾರ ನಗರ ಪೊಲೀಸ್ ಠಾಣೆಗೆ ಗಡಿಪಾರು ಮಾಡಲಾಗಿದೆ.


ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿ ನಿವಾಸಿ ಆರಿಫ್ ವಿರುದ್ಧ 5 ಕೊಲೆ ಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಪ್ರಕರಣ ದಾಖಲಾಗಿದ್ದು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಆತನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.