ಸಂಭ್ರಮದ ಹನುಮ ಜಯಂತಿ ಆಚರಣೆ

ಲೋಕಬಂಧು ನ್ಯೂಸ್ | ಉಡುಪಿ, ಏ.2
ಹನುಮ ಜಯಂತಿಯನ್ನು ಗುರುವಾರ ಸಾಂಪ್ರದಾಯಿಕ ಶ್ರದ್ಧಾಭಕ್ತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಗಿದ್ದು ಮುಖ್ಯಪ್ರಾಣ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಭೋಜನ ಶಾಲೆಯ ಶ್ರೀ ಆಂಜನೇಯ ಸನ್ನಿಧಿಯಲ್ಲಿ ವಾಯುಸ್ತುತಿ ಪುನಶ್ಚರಣಪೂರ್ವಕ ವಿಶೇಷ ಪೂಜೆ ನಡೆಸಲಾಯಿತು.


ವಾಯುಸ್ತುತಿ ಹೋಮ
ಯಾಗಶಾಲೆಯಲ್ಲಿ ವಾಯುಸ್ತುತಿ ಪುನಶ್ಚರಣೆ ಹೋಮ ನಡೆಯಿತು.
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಪೂರ್ಣಾಹುತಿ ಸಂದರ್ಭದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಶಾಸಕ ಯಶಪಾಲ್ ಸುವರ್ಣ ಮೊದಲಾದವರಿದ್ದರು‌.