ಲೋಕಬಂಧು ನ್ಯೂಸ್ | ಉಡುಪಿ, ಏ.4
ಸಂಪೂರ್ಣ ನವೀಕರಣಗೊಂಡ ಇಂದ್ರಾಳಿಯಲ್ಲಿರುವ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಅಷ್ಟಬಂಧ ಸಹಿತ ಪುನಃ ಪ್ರತಿಷ್ಠಾಪನಾ ಮಹೋತ್ಸವದ ನೂತನ ಶಿಲಾಮಯ ಗುಡಿಯಲ್ಲಿ ಏ.4ರಂದು ಶನಿವಾರ ಬೆಳಗ್ಗೆ 6.48ರ ಮೀನ ಲಗ್ನ ಸುಮುಹೂರ್ತದಲ್ಲಿ ನಡೆಯಿತು.ವೇ.ಮೂ.ಪುತ್ತೂರು ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಅವರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬಳಿಕ ಮಹಾಸ್ನಪನ ಕಲಶಾಭಿಷೇಕ, ಪ್ರಾಯಶ್ಚಿತ ಹೋಮಾದಿಗಳು, ಶ್ರೀ ವಾಯುಸ್ತುತಿ ಹೋಮ, ನವಗ್ರಹ ಹೋಮ, ಪವಮಾನ ಹೋಮ, ತತ್ತ್ವಹೋಮ, ಮಧ್ಯಾಹ್ನ 12.15ಕ್ಕೆ ಮಹಾಪೂಜೆ, ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪರಿಸರದಲ್ಲಿ ಅನ್ನಸಂತರ್ಪಣೆ ನಡೆಯಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೂಪತಿ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕುಶಲ ಶೆಟ್ಟಿ, ಸಮಿತಿಯ ಪದಾಧಿಕಾರಿಗಳು, ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.
ಗಣ್ಯರ ಭೇಟಿ
ಶ್ರೀಕ್ಷೇತ್ರಕ್ಕೆ ಅ.ಭಾ. ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಮುಂಬೈ, ಕಾಪು ಶ್ರೀ ಹೊಸಮಾರಿಗುಡಿ ದಿವ್ಯಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜರ್ಷಿ ಕಾಪು ವಾಸುದೇವ ಶೆಟ್ಟಿ, ಉದ್ಯಮಿ ಶ್ರೀನಾಗೇಶ ಹೆಗ್ಡೆ ಮೊದಲಾದವರು ಭೇಟಿ ನೀಡಿದ್ದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೂಪತಿ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕುಶಲ ಶೆಟ್ಟಿ ಮೊದಲಾದವರು ಆತ್ಮೀಯವಾಗಿ ಗೌರವಾದರಗಳೊಂದಿಗೆ ಬರಮಾಡಿಕೊಂಡರು.
ಸಾಂಸ್ಕೃತಿಕ ಕಾರ್ಯಕ್ರಮ
ಮಣಿಪಾಲ ನೃತ್ಯಕಲಾ ಮಂದಿರದ ವಿದುಷಿ ಸವಿತಾ ಮುರಳೀಧರ ಅವರ ಶಿಷ್ಯವೃಂದದಿಂದ ನೃತ್ಯ ವೈಭವ, ಮಣಿಪಾಲ ಹುಡ್ಕೊ ಕಾಲನಿ ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿಯಿಂದ ವಿ| ಉಷಾ ಹೆಬ್ಬಾರ್ ನೇತೃತ್ವದಲ್ಲಿ ಭಜನಾಮೃತಂ ಮತ್ತು ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರ ಕಲಾವಿವರಿಂದ ಯಕ್ಷಗಾನ ತಾಳಮದ್ದಲೆ ನಡೆಯಿತು.
ಅತ್ಯುತ್ತಮ ಪಾರ್ಕಿಂಗ್ ವ್ಯವಸ್ಥೆ
ಶ್ರೀ ಮುಖ್ಯಪ್ರಾಣ ದೇವರ ಗುಡಿಗೆ ಬರುವ ಭಕ್ತರ ಅನುಕೂಲಕ್ಕಾಗಿ ನಾಲ್ಕು ಕಡೆಗಳಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು ಅಲ್ಲಲ್ಲಿ ಸ್ವಯಂಸೇವಕರು, ಭದ್ರತಾ ಸಿಬಂದಿ ಅಗತ್ಯ ಮಾಹಿತಿ ನೀಡಿ ವಾಹನ ಸುಗಮ ಸಂಚಾರ ಮತ್ತು ನಿಲುಗಡೆಗೆ ಸಹಕರಿಸುತ್ತಿದ್ದರು. ಪಾರ್ಕಿಂಗ್ ಪ್ರದೇಶದಿಂದ ಆಂಜನೇಯ ಗುಡಿ ವರೆಗೆ ಸಾಗಲು ಎಲೆಕ್ಟಿಕಲ್ ಆಟೋ ವ್ಯವಸ್ಥೆ ಮಾಡಲಾಗಿತ್ತು.

.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)