ಲೋಕಬಂಧು ನ್ಯೂಸ್ ಉಡುಪಿ, ಏ.29
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಮೇ 3ರಂದು ನಡೆಯುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ಮಂಗಳವಾರ ವೀಳ್ಯ ನೀಡಿ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪ್ರಸಿದ್ಧ ವೈದ್ಯ ಡಾ.ಭಾಸ್ಕರಾನಂದ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವುದು ನಮಗೆಲ್ಲರಿಗೂ ಹೆಮ್ಮೆ. ವೈದ್ಯರಾಗಿ ಕಲಾವಿದರಾಗಿ ಮತ್ತು ಸಂಘಟಕರಾಗಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಡಾ. ನಳಿನಿ ಮತ್ತು ಡಾ. ಭಾಸ್ಕರಾನಂದಕುಮಾರ್ ದಂಪತಿಯನ್ನು ಗೌರವಿಸಲಾಯಿತು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಶ್ರೀನಿವಾಸ ಉಪಾಧ್ಯ, ಕಲಾಪೋಷಕ ಭುವನ ಪ್ರಸಾದ ಹೆಗ್ಡೆ, ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಪ್ರಭಾಕರ್ ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಪದಾಧಿಕಾರಿಗಳಾದ ರಂಜನಿ ವಸಂತ್, ಸತೀಶ್ ಕೊಡವೂರು, ರಾಜೇಶ್ ಭಟ್ ಪಣಿಯಾಡಿ, ಅನಿತಾ ಸಿಕ್ವೇರ, ಆರ್.ವಸಂತ್, ಶಶಿಕಾಂತ್ ಶೆಟ್ಟಿ, ದೀಪಾ ಕರ್ಕಿ, ಚಂದ್ರಕಾಂತ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.