ಲೋಕಬಂಧು ನ್ಯೂಸ್ | ಉಡುಪಿ, ಏ.3
ಪುನಃಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕ ಸಡಗರದಲ್ಲಿರುವ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವಳಕ್ಕೆ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಭೇಟಿ ನೀಡಿ, ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀಗಳನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಭೂಪತಿ ಶೆಟ್ಟಿ, ಇಂದ್ರಾಣಿ ದೇವಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕುಶಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ಮೊದಲಾದವರು ಬರಮಾಡಿಕೊಂಡರು.
