ಲೋಕಬಂಧು ನ್ಯೂಸ್ ಕಾಪು, ಏ.14
ತಾಲೂಕು ಆಡಳಿತ ಕಾಪು, ತಾಲೂಕು ಪಂಚಾಯತ್, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಾಪು ತಾಲೂಕು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಕಾಪು ಪ್ರಜಾಸೌಧದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ. ಆರ್. ಅಂಬೇಡ್ಕರ್ 135ನೇ ಜನ್ಮ ದಿನಾಚರಣೆ ಮಾಡಲಾಯಿತು.ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಅನಂತ ಶಂಕರ್, ಕಾಪು ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿಜಯಲಕ್ಷ್ಮಿ ಮೊದಲಾದವರಿದ್ದರು.