ಕಾರ್ಕಳ ಜ್ಞಾನಸುಧಾ: ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಲೋಕಬಂಧು ನ್ಯೂಸ್ | ಕಾರ್ಕಳ, ಏ.2
ಇಲ್ಲಿನ ಗಣಿತ ನಗರದಲ್ಲಿರುವ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟ್‌ನ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಈ ಬಾರಿಯೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 6ರಿಂದ 10ನೇ ತರಗತಿ ವರೆಗೆ ಪ್ರತೀ ತರಗತಿಗೆ 5 ಮಂದಿ ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ ಹತ್ತನೇ ತರಗತಿಯಲ್ಲಿ ಶೇ. 95ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ.85ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟನೆ ತಿಳಿಸಿದೆ.


ಹೆಚ್ಚಿನ ಮಾಹಿತಿಗಾಗಿ ಶಾಲಾ ಕಚೇರಿ 8147454907, ಕಾಲೇಜು ಕಚೇರಿ 8147454906 ಅಥವಾ 7259500911ನ್ನು ಸಂಪರ್ಕಿಸಹುದು.