ಲೋಕಬಂಧು ನ್ಯೂಸ್ ಕಾರ್ಕಳ, ಏ.30
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೋಮನಾಥ ಯಾನೆ ಸೋಮು (40) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ.ತೆಳ್ಳಾರು ರಸ್ತೆಯ ಕುಂಬ್ರಪದವು ನಿವಾಸಿ ಸೋಮನಾಥ ವಿರುದ್ಧ ಒಟ್ಟು 11 ಪ್ರಕರಣ ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ ಗಡಿಪಾರು ಆದೇಶ ಹೊರಡಿಸಿದ್ದು, ಆತನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.