ಲೋಕಬಂಧು ನ್ಯೂಸ್ | ಉಡುಪಿ, ಏ.20
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್'ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಘಟಕದಲ್ಲಿ ವೆಲ್ಡಿಂಗ್ ಮಾಡುತ್ತಿರುವ ಸಂದರ್ಭದಲ್ಲಿ ಅದರ ಬೆಂಕಿಯ ಕಿಡಿ ಅಲ್ಲಿಯೇ ಸಮೀಪದಲ್ಲಿದ್ದ ಆಯಿಲ್'ಗೆ ತಗುಲಿ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ.
ಅದರಿಂದಾಗಿ ಅಲ್ಲಿನ ಬಾಯ್ಲರ್'ಗೂ ಬೆಂಕಿ ವಿಸ್ತರಿಸಿತು.
ಕೂಡಲೇ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದವರು ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.
