ಲೋಕಬಂಧು ನ್ಯೂಸ್ | ಉಡುಪಿ, ಏ.9
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗುರುವಾರ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಭೇಟಿ ನೀಡಿ ದೇವರ ದರ್ಶನ ಪಡೆದರು.
ಶ್ರೀ ದೇವಳದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಸಂಬಂಧ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದ ಅವರು 5 ಲಕ್ಷ ರೂ. ದೇಣಿಗೆ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ನಗರಸಭೆ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಭೋಜೇಗೌಡ ಅವರನ್ನು ದೇವಳದ ವತಿಯಿಂದ ಗೌರವಿಸಲಾಯಿತು.
.jpg)
.jpg)