ಲೋಕಬಂಧು ನ್ಯೂಸ್ | ಉಡುಪಿ, ಏ.18
ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರ ಸೇರ್ಪಡೆಗೆ 7ರಿಂದ 10ನೇ ತರಗತಿ ವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 9900907702 ಅಥವಾ 9901190392ನ್ನು ಸಂಪರ್ಕಿಸುವಂತೆ ಕೇಂದ್ರದ ಪ್ರಕಟನೆ ತಿಳಿಸಿದೆ.
