ಲೋಕಬಂಧು ನ್ಯೂಸ್ | ಉಡುಪಿ, ಏ.6
ಅಷ್ಟಬಂಧ ಪುನಃಪ್ರತಿಷ್ಠೆಗೊಂಡು ಬ್ರಹ್ಮಕುಂಭಾಭಿಷೇಕ ಸಂಪನ್ನಗೊಂಡ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವಳಕ್ಕೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶಿಷ್ಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರೊಡಗೂಡಿ ಆಗಮಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೂಪತಿ ಶೆಟ್ಟಿ ಮೊದಲಾದವರು ಯತಿದ್ವಯರನ್ನು ಗೌರವಾದರಗಳಿಂದ ಬರಮಾಡಿಕೊಂಡರು.
