ದೇವಳ ಜೀರ್ಣೋದ್ಧಾರಕ್ಕೆ ಕೊಡುಗೆ

ಲೋಕಬಂಧು ನ್ಯೂಸ್ | ಉಡುಪಿ, ಏ.17
ಅಂಬಾಗಿಲು ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ನೀಡಿದ 15 ಲಕ್ಷ ರೂ. ಮೊತ್ತದ ಡಿ.ಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ದೇವಸ್ಥಾನ ಆಡಳಿತ ಮಂಡಳಿಗೆ ಹಸ್ತಾಂತರಿದರು.
ಈ ಸಂದರ್ಭದಲ್ಲಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಹರೀಶ್ ಕೋಟ್ಯಾನ್, ಒಕ್ಕೂಟದ ವಲಯ ಅಧ್ಯಕ್ಷೆ ಶೀಲಾ ನಾಯಕ್, ವಲಯ ಮೇಲ್ವಿಚಾರಕಿ ಮಂಜುಳಾ, ಸೇವಾಪ್ರತಿನಿಧಿ ರೇಣುಕಾ ಹಾಗೂ ರಾಧಾ ಉಪಸ್ಥಿತರಿದ್ದರು.