ಪಿಯುಸಿ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳು ಟಾಪರ್

ಲೋಕಬಂಧು ನ್ಯೂಸ್ | ಕಾರ್ಕಳ, ಏ.9
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಪ್ರಕಟಿಸಿದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ 93.9 ಶೇ. ಫಲಿತಾಂಶ ದಾಖಲಿಸಿ ಪ್ರಥಮ ಸ್ಥಾನ ಪಡೆದಿದ್ದು ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವೈಷ್ಣವಿ ಕುಲಕರ್ಣಿ ಮತ್ತು ಚೈತ್ರಿಕ ಚೌಧರಿ ತಲಾ 597 ಹಾಗೂ ಉಡುಪಿ ಜ್ಞಾನಸುಧಾ ಕಾಲೇಜಿನ ಆರ್ನವಿ 597 ಅಂಕ ಗಳಿಸಿ ಜಿಲ್ಲೆಗೆ ಟಾಪರ್ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಶಾನ್ವಿ ದಿನೇಶ್ (595), ಚಾನ್ವಿ (593), ಪ್ರಥುಲ್ ಡಿ. (592), ಮಣಿಪಾಲ ಜ್ಞಾನಸುಧಾದ ಪ್ರಕ್ಷಿತ್ (592) ಮತ್ತು ಸಾಜನ್ (591) ಅಂಕ ಗಳಿಸಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.