ಮೀಸಲಾತಿ ಪ್ರಮಾಣ ಹಚ್ಚಿಸಲು ಮನವಿ

ಲೋಕಬಂಧು ನ್ಯೂಸ್ | ಉಡುಪಿ, ಏ.15
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆ ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ.15 ಮತ್ತು ಶೇ.3ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಎಚ್.ಎನ್.ನಾಗಮೋಹನದಾಸ್ ಆಯೋಗ, ಮೀಸಲಾತಿ ಪ್ರಮಾಣವನ್ನು ಅನುಕ್ರಮವಾಗಿ ಶೇ.17 ಮತ್ತು ಶೇ.7ರಷ್ಟು ಹೆಚ್ಚಳ ಮಾಡಬೇಕೆಂದು ವರದಿ ನೀಡಿದೆ. ಆ ವರದಿಯಂತೆ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಸಿಪಿಐ (ಎಂ) ಬುಧವಾರ ಸಂಸದರಿಗೆ ಮನವಿ ಸಲ್ಲಿಸಿತು.
ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ನ್ಯಾ.ನಾಗಮೋಹನದಾಸ್ ವರದಿಯನ್ನು ಬೆಂಬಲಿಸಿವೆ. ಕರ್ನಾಟಕ ವಿಧಾನಸಭೆಯ ಆ ತೀರ್ಮಾನಕ್ಕೆ ಒಕ್ಕೂಟ ಸರಕಾರ ಒಪ್ಪಿಗೆ ನೀಡಿ ಸಂವಿಧಾನದ 9ನೇ ಪರಿಚ್ಛೇಧಕ್ಕೆ ಸೇರ್ಪಡೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡು ಸಂಸದರಿಗೆ ಮನವಿ ನೀಡುವ ಭಾಗವಾಗಿ ಮನವಿ ನೀಡಲಾಗಿದ್ದು ಸಂಸದರ ಆಪ್ತ ಸಹಾಯಕರ ಮೂಲಕ 11 ಬೇಡಿಕೆಗಳ ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಸಿಪಿಐ (ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್.ನರಸಿಂಹ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಇದ್ದರು.