ರೌಡಿಶೀಟರ್ ಕಾರ್ತಿಕ್ ಆಚಾರ್ ಗಡಿಪಾರು

ಲೋಕಬಂಧು ನ್ಯೂಸ್ | ಉಡುಪಿ, ಏ.10
ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಜ್ಞಾಡಿ ಮನೆ ನಿವಾಸಿ ಕಾರ್ತಿಕ್ ಆಚಾರ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯೂ ಆಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಆತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿದೆ. ಆತನನ್ನು ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.