ಲೋಕಬಂಧು ನ್ಯೂಸ್ ಉಡುಪಿ, ಏ.19
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಮೇ 3ರಂದು ಡಾ.ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆಯಲ್ಲಿ ನಡೆಯುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ `ಭೀಷ್ಮೋತ್ಸವ'ದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಬಿಡುಗಡೆಗೊಳಿಸಿ `ನಾನು ಬರುತ್ತೇನೆ, ನೀವೆಲ್ಲಾ ಬನ್ನಿ' ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ ಗೌರವ ಸಲಹೆಗಾರರಾದ ಉಡುಪಿ ವಿಶ್ವನಾಥ್ ಶೆಣೈ ಮತ್ತು ಪ್ರೊ. ಶಂಕರ್, ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜನಿ ವಸಂತ್, ಗೌರವ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ವಸಂತ್, ದೀಪಾ ಕರ್ಕಿ, ಚಂದ್ರಶೇಖರ್, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮೊದಲಾದವರಿದ್ದರು.