ಲೋಕಬಂಧು ನ್ಯೂಸ್ | ಉಡುಪಿ, ಏ.19
ಪರ್ಕಳ ಪೇಟೆಯ ಸ್ವರ್ಣೋದ್ಯಮಿ, ಕಾಂಗ್ರೆಸ್ ಮುಖಂಡ ಗೋಪಾಲ ಆಚಾರ್ಯ (74) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವಲ್ಲಿ ಅಂದಿನ ಕಾಲದಲ್ಲಿ ಸಕ್ರಿಯರಾಗಿದ್ದರು. ಮನೋರಮಾ ಮಧ್ವರಾಜ್ ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಚುನಾವಣೆಯಲ್ಲಿ ಅವರ ಗೆಲುವಿಗೆ ಸಹಕರಿಸಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸದಸ್ಯರಾಗಿದ್ದ ಅವರು ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಮೃತರಿಗೆ ಪತ್ನಿ,ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳಿದ್ದಾರೆ.
