ಲೋಕಬಂಧು ನ್ಯೂಸ್ ಉಡುಪಿ, ಏ.5
ವಿವಿಧ ಸಂಘಟನೆಗಳಲ್ಲಿ ತೊಡಗಿಕೊಂಡಿದ್ದ ಹಿರಿಯ ಪತ್ರಕರ್ತ ಚೆಲುವರಾಜ ಪೆರಂಪಳ್ಳಿ (69) ಅಸೌಖ್ಯದಿಂದಾಗಿ ಭಾನುವಾರ ಸ್ವಗೃಹದಲ್ಲಿ ನಿಧನರಾದರು.ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಪೆರಂಪಳ್ಳಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ, ಯುವಕ ಮಂಡಲದ ಗೌರವಾಧ್ಯಕ್ಷ, ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ಟ್ರಸ್ಟಿಯಾಗಿದ್ದ ಅವರು 'ತರಂಗ' ಉಪಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.
ನಾಟಕ ರಚನೆಕಾರ, ಸಾಹಿತಿ ಹಾಗೂ ಊರಿನ ದೇವಸ್ಥಾನ ಮತ್ತು ದೈವಸ್ಥಾನಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಆದಿವುಡುಪಿ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ‘ಬೈದಶ್ರೀ‘ಯ ಉಪಾಧ್ಯಕ್ಷ ಮತ್ತು ವಕ್ತಾರರಾಗಿದ್ದರು.