ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ

ಲೋಕಬಂಧು ನ್ಯೂಸ್ ಉಡುಪಿ, ಏ.19
ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದೂ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು 21 ವರ್ಷ ಕಾಲ ಕಾರ್ಯನಿರ್ವಹಿಸಿದ್ದರು.


ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಹಿರಿಯ ಉಪ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದರು.


ಮೃತರಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ.


ಗಣೇಶ ಪ್ರಭು ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.