ಡಾ.ಸಿಂಧ್ಯಾಗೆ ಗೌರವಾಭಿನಂದನೆ

ಲೋಕಬಂಧು ನ್ಯೂಸ್ ಉಡುಪಿ,‌ ಏ.25
ಕಲ್ಬುರ್ಗಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರಿಗೆ ಉಡುಪಿ ಜಿಲ್ಲಾ ಸಂಸ್ಥೆಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ್ ಭಟ್, ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಜಿಲ್ಲಾ ಉಪಾಧ್ಯಕ್ಷರಾದ ದೀಪಿಕಾ ಸುಭಾಷ್ ಶೆಟ್ಟಿ ಮತ್ತು ಮಹಮ್ಮದ್ ಮೌಲಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಬೈಂದೂರು ಸ್ಥಳೀಯ ಸಂಸ್ಥೆ ಅಧ್ಯಕ್ಷ ನರಸಿಂಹ ದೇವಾಡಿಗ, ಕುಂದಾಪುರ ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಗುಣರತ್ನ, ಉಡುಪಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ವಿನ್ಸೆಂಟ್ ಡಿ'ಕೋಸ್ತಾ, ಕಾಪು ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಗೀತಾ ಕೋಟ್ಯಾನ್, ಬ್ರಹ್ಮಾವರ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಆರ್.ಟಿ. ಭಟ್, ಉಡುಪಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ ಉಪಸ್ಥಿತರಿದ್ದರು.