ಲೋಕಬಂಧು ನ್ಯೂಸ್ ಬೆಂಗಳೂರು, ಏ.9
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ 96.39ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ. ಜಿಲ್ಲೆಯ ಹೊರ ಭಾಗಗಳಿಂದಲೂ ಬಂದು ಅಲ್ಲಿ ವ್ಯಾಸಂಗ ಮಾಡುತ್ತಾರೆ. ಹಲವು ವರ್ಷಗಳಿಂದ ಪಿಯುಸಿ ಪರೀಕ್ಷೆಯಲ್ಲಿ ಮೊದಲ ಎರಡು ಸ್ಥಾನ ಕಾಯ್ದುಕೊಂಡಿರುವ ಉಡುಪಿ ಜಿಲ್ಲೆಯ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆ ಅಗ್ರಸ್ಥಾನ ಪಡೆಯಲು ಕಾರಣರಾದ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು, ಎಲ್ಲಾ ಕಾಲೇಜುಗಳ ಮುಖ್ಯಸ್ಥರು, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಅವರು, ವಿದ್ಯಾರ್ಥಿಗಳ ಜೀವನ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.