ಲೋಕಬಂಧು ನ್ಯೂಸ್ ಉಡುಪಿ, ಏ.9
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಸಾಧನೆಗಾಗಿ ಉತ್ತಮ ರೀತಿಯಲ್ಲಿ ಪರೀಕ್ಷೆಗೆ ತಯಾರಿ ಮಾಡಿದ ಉಡುಪಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರು ಅಭಿನಂದನಾರ್ಹರು.
ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಿನ ಅಂಕ ಪಡೆದು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿ ಈ ಬಾರಿ ವಿಶೇಷ ಸಾಧನೆ ಮಾಡಿದ್ದು ಮುಂದಕ್ಕೂ ಇನ್ನಷ್ಟು ಸಾಧನೆ ಮಾಡಲು ಈ ಫಲಿತಾಂಶ ಪ್ರೇರಣೆಯಾಗಲಿ ಎಂದು ಜ್ಯೋತಿ ಹೆಬ್ಬಾರ್ ಹಾರೈಸಿದ್ದಾರೆ.