ಸಾಹಿತ್ಯ ಸಮ್ಮೇಳನ ಭಿತ್ತಿಪತ್ರ ಅನಾವರಣ

ಲೋಕಬಂಧು ನ್ಯೂಸ್ | ಉಡುಪಿ, ಏ.2
ಉಡುಪಿ ತಾಲೂಕು 16ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಮೇ 3ರಂದು ಡಾ.ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆಯಲ್ಲಿ ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ  ಪ್ರಚಾರಾರ್ಥ ಭಿತ್ತಿಪತ್ರವನ್ನು ಉಡುಪಿ ಶಾಸಕ ಯಶಪಾಲ ಸುವರ್ಣ ಬಿಡುಗಡೆಗೊಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತಾ ಕನ್ನಡಿಗರ ಮನೆ ಮಾತಾಗಿದೆ. ಸಮ್ಮೇಳನ ಯಶಸ್ಸಾಗಲಿ ಎಂದು ಹಾರೈಸಿದರು.
ತಾನು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರೂ ಭಾಗವಹಿಸುವಂತೆ ಕರೆ ನೀಡಿದರು.


ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಸಮ್ಮೇಳನ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸಾಮಾಜಿಕ ಜಾಲತಾಣ ಮುಖ್ಯಸ್ಥ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ಮಹಿಳಾ ಪ್ರತಿನಿಧಿ ಅನಿತ ಸಿಕ್ವೇರ, ಸದಸ್ಯರಾದ ದೀಪ ಕರ್ಕಿ, ಪ್ರಸನ್ನ ಕುಮಾರ್ ಹಿರೇಮಠ ಇದ್ದರು.