ಲೋಕಬಂಧು ನ್ಯೂಸ್ ಉಡುಪಿ, ಏ.19
ಉಡುಪಿ ಕ್ರೈಸ್ತ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಪಟ್ಟಾಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸಿಲು ಆಗಮಿಸಿದ ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಭಾನುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಆತ್ಮೀಯವಾಗಿ ಸ್ವಾಗತಿಸಲಾಯಿತು.ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ.ಸ್ಟೀಫನ್ ಡಿ'ಸೋಜಾ ಡಾ.ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಜುಡಿಶಿಯಲ್ ವಿಕಾರ್ ವಂ.ಡಾ.ರೋಶನ್ ಡಿ'ಸೋಜ, ಧರ್ಮಗುರು ವಂ.ಜಾನ್ಸಿಲ್ ಆಳ್ವಾ, ವಿಮಾನ ನಿಲ್ಡಾಣದ ಕಸ್ಟಮ್ಸ್ ವಿಭಾಗದ ಸಹಾಯಕ ಕಮೀಷನರ್ ಶುಭ ರೊಡ್ರಿಗಸ್ ಹಾಗೂ ಓಸ್ವಲ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು.