ಲೋಕಬಂಧು ನ್ಯೂಸ್ ಉಡುಪಿ, ಏ.29
ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಲಾದ ಬೇಸಿಗೆ ಶಿಬಿರ ಈಚೆಗೆ ಸಮಾಪನಗೊಂಡಿತು.ಯಕ್ಷಗಾನ ಹೆಜ್ಜೆಗಾರಿಕೆ, ವೇಷಭೂಷಣ ಮತ್ತು ಬಣ್ಣಗಾರಿಕೆ ಬೇಸಿಗೆ ಶಿಬಿರದಲ್ಲಿ ಕಲಿಸಲಾಯಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಮಾಹೆ ಕುಲಸಚಿವ ಡಾ.ಪಿ.ಗಿರಿಧರ ಕಿಣಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ, ವಿದ್ಯಾರ್ಥಿಗಳು ತಮ್ಮ ರಜಾ ಅವಧಿಯಲ್ಲಿ ಇಂಥ ಶಿಬಿರಗಳಲ್ಲಿ ಭಾಗವಹಿಸುವ ಅಗತ್ಯತೆಯನ್ನು ತಿಳಿಸಿ, ಇದು ಮಕ್ಕಳ ಶಾಲಾ ಕಲಿಕೆಯೊಂದಿಗೆ ನಮ್ಮ ಕಲೆ ಹಾಗೂ ಪರಂಪರೆ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಸಹಕಾರಿಯಾಗಲಿದೆ. ಜೊತೆಗೆ ಸಮಯದ ಸದುಪಯೋಗವೂ ಆಗುತ್ತದೆ ಎಂದರು.
ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಪ್ರೊ.ಎಸ್.ವಿ.ಉದಯ ಕುಮಾರ್ ಶೆಟ್ಟಿ, ಮಂಜುನಾಥ ಮಯ್ಯ ಹಾಗೂ ಮೀನಾ ಲಕ್ಷಣಿ ಅಡ್ಯಂತಾಯ ಹಾಗೂ ಕೇಂದ್ರದ ಗುರುಗಳು ಉಪಸ್ಥಿತರಿದ್ದರು.
ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸಂಯೋಜಿಸಿದರು.
ಆರಂಭದಲ್ಲಿ ಬೇಸಿಗೆ ಶಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು.