ಲೋಕಬಂಧು ನ್ಯೂಸ್ ಬೆಂಗಳೂರು, ಮೇ 10
ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಮೇ 11ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.ಸರ್ಕಾರಿ ಕಚೇರಿಗಳು ಹಾಗೂ ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅಂತೆಯೇ ಸರ್ಕಾರಿ ಸ್ವಾಮ್ಯದ ಅಂಗಸಂಸ್ಥೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.
ರಾಜ್ಯಾದ್ಯಂತ ಶೋಕಾಚರಣೆ
ಮೇ10ರಿಂದ 12ರ ವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮತ್ತು ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.
ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಮೃತ ಸಚಿವ ಸುಧಾಕರ್ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.