ಮೇ 12: ಶ್ರೀ ಕೇಶವಾನಂದ ಭಾರತೀ ಸ್ಮೃತಿ ‌ಮಂದಿರ ಲೋಕಾರ್ಪಣೆ

ಲೋಕಬಂಧು ನ್ಯೂಸ್ | ಕಾಸರಗೋಡು, ಮೇ 8
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ನಿರ್ಮಿಸಲಾದ ಶ್ರೀ ಕೇಶವಾನಂದ ಭಾರತೀ ಸ್ಮೃತಿ ಮಂದಿರ ಮೇ 12ರಂದು ಲೋಕಾರ್ಪಣೆಗೊಳ್ಳಲಿದೆ.
ಅಂದು ಅಪರಾಹ್ನ ‌4 ಗಂಟೆಗೆ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ ಉದ್ಘಾಟಿಸುವರು.
ಮಂಗಳೂರಿನ ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾದ ಈ ಭವನದಲ್ಲಿ ಯಕ್ಷಗಾನ, ಕಲೆ, ಸಂಸ್ಕೃತಿ ಇತ್ಯಾದಿ ನಿರಂತರ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸಿರಿಬಾಗಿಲು ಪ್ರತಿಷ್ಠಾನದ ಪ್ರವರ್ತಕ ರಾಮಕೃಷ್ಣ ಮಯ್ಯ ತಿಳಿಸಿದ್ದಾರೆ.


ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಅನಾವರಣಗೊಳಿಸಲಾಯಿತು.