ಲೋಕಬಂಧು ನ್ಯೂಸ್ | ಉಡುಪಿ, ಮೇ 20
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಮೇ 21ರಂದು ಸಂಜೆ 5.15 ಗಂಟೆಗೆ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ ಬರುವ 21 ಮೇ ಗುರುವಾರ ಸಂಜೆ 5.15ಕ್ಕೆ ನಡೆಯಲಿದೆ.
ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ ಅವರು ಕಾರ್ಯಕ್ರಮ ಲ ಉದ್ಘಾಟಿಸಲಿದ್ದು,ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ.ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಹಾಗೂ ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕ ನಾಗರಾಜ್ ಹೆಬ್ಬಾರ್ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಪುಸ್ತಕ ಮನೆಗಳ ಭೇಟಿ ಕಾರ್ಯಕ್ರಮ ಇದೆ ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ತಿಳಿಸಿದ್ದಾರೆ.